ಅಕ್ಕಮಹಾದೇವಿಯವರ ಆಯ್ದ ವಚನಗಳು. ೧ ಅಂಗ ಕ್ರಿಯಾಲಿಂಗವ ವೇಧಿಸಿ, ಅಂಗ ಲಿಂಗದೊಳಗಾಯಿತ್ತು. ಮನ ಅರಿವ ಬೆರಸಿ, ಜಂಗಮ ಸೇವೆಯ ಮಾಡಿ, ಮನಜಂಗಮಲಿಂಗದೊಳಗಾಯಿತ್ತು. ಭಾವ ಗುರುಲಿಂಗದೊಳಗೆ ಬೆರಸಿ, ಮಹಾಪ್ರಸಾದವ ಭೋಗಿಸಿ, ಭಾವ ಗುರುಲಿಂಗದೊಳಗಾಯಿತ್ತು. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಒಲುಮೆಯಿಂದ ಸಂದಳಿದು ಸ್ವಯಲಿಂಗಿಯಾದೆನಯ್ಯಾ ಪ್ರಭುವೆ. ************************************************************** ೨ ಅಂಗ, ಲಿಂಗವ ವೇಧಿಸಿ, ಅಂಗ ಲಿಂಗದೊಳಗಾಯಿತ್ತು. ಮನ, ಲಿಂಗವ ವೇಧಿಸಿ, ಮನ ಲಿಂಗದೊಳಗಾಯಿತ್ತು. ಭಾವ, ಲಿಂಗವ ವೇಧಿಸಿ, ಭಾವ ಲಿಂಗದೊಳಗಾಯಿತ್ತು. ಚೆನ್ನಮಲ್ಲಿಕಾರ್ಜುನಾ, ನಿಮ್ಮ ಒಲುಮೆಯ ಸಂಗದಲ್ಲಿರ್ದು ಸ್ವಯಲಿಂಗವಾಯಿತ್ತು. ************************************************************** ...
Comments
Post a Comment