ಕಾಣುತಿವೆ ನಾಳೆಗಳು.... Kaanuthive naalegalu. A poem by Kumar B Bagival

 ಕಾಣುತಿವೆ ನಾಳೆಗಳು....


ಕಾಣುತಿವೆ ನಾಳೆಗಳು ನಾ ನಡೆವ ಹಾದಿಯಲಿ

ನಾನಾಡುವಾ ಮಾತುಗಳ ಮಂದಾಳದಲಿ 

ನಾ ಮಾಡುವಾ ಕೃತಿಗಳಾಗಾಸದ ಬೆಳಕಿನಲಿ

ನಾ ಸೇರುವಾ ಸಂಘಗಳ ನೆರಳಿನ ತಂಪಿನಲಿ.


ಕಾಣುತಿವೆ ನಾಳೆಗಳು ನಾ ನಡೆವ ಹಾದಿಯಲಿ

ಎದುರಾದ ಸವಾಲುಗಳನು ನಾ ಎದುರಿಸುವ ರೀತಿಯಲಿ

ಒದರಾಡುವ ಗಾಡಿಯಲು ಅಲುಗದೇ ಕುಳಿತು ದಡ ಸೇರುವಲಿ

ಆಗಸಕೆ ಹಾರುತಿಹ ಬದುಕ ಗಾಳಿಪಟದ ದಾರದ ಬಿಗಿ ಹಿಡಿತದಲಿ.


ಕಾಣುತಿವೆ ನಾಳೆಗಳು ನಾ ನಡೆವ ಹಾದಿಯಲಿ

ತಿರುವಿರುವ ದಾರಿಯಲಿ ನಿಯಂತ್ರಣವ ಮಾಡುವಲಿ

ಬರವಿರುವ ಭೂವಿಗೊಂದಿಷ್ಟು ನೀರನುಣಿಸುವಲಿ

ಕರವಿಡಿದು ಮೇಲೆತ್ತುವಲಿ ಮುಳುಗುವಡಗನು ನೀರಿನಲಿ.


ರಚನೆ: ಕುಮಾರ್ ಬಿ ಬಾಗೀವಾಳ್

Comments

Popular posts from this blog

ಮಕರ ಸಂಕ್ರಾಂತಿಯ ನಿಜವಾದ ಆಚರಣೆ ಎಂದು?

ಅಕ್ಕಮಹಾದೇವಿಯವರ ಆಯ್ದ ವಚನಗಳು. Selected Vachanas of Akkamahadevi.

ವೃತ್ತಗಳು CIRCLES