ಅಲ್ಲಮ ಪ್ರಭುಗಳ ದೃಷ್ಟಿಯಲ್ಲಿ ಜಗಜ್ಯೋತಿ ಬಸವಣ್ಣನವರು.. Jagajyothi Basaveshwar on the view of Allama Prabhu Great Vachanakaras
ಅಲ್ಲಮ ಪ್ರಭುಗಳ ದೃಷ್ಟಿಯಲ್ಲಿ ಜಗಜ್ಯೋತಿ ಬಸವಣ್ಣನವರು.. ಅಂಗದಲ್ಲಿ ಆಚಾರವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಆಚಾರದಲ್ಲಿ ಪ್ರಾಣವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಪ್ರಾಣದಲ್ಲಿ ಲಿಂಗವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಲಿಂಗದಲ್ಲಿ ಜಂಗಮವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಜಂಗಮದಲ್ಲಿ ಪ್ರಸಾದವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಪ್ರಸಾದದಲ್ಲಿ ನಿತ್ಯವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ನಿತ್ಯದಲ್ಲಿ ದಾಸೋಹವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ದಾಸೋಹದಲ್ಲಿ ತನ್ನ ಮರೆದು, ನಿಶ್ಚಿಂತನಿವಾಸಿಯಾಗಿ ಐದಾನೆ ಗುಹೇಶ್ವರಲಿಂಗದಲ್ಲಿ. ಸಂಗನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಧನ್ಯರಾಗಬೇಕು ನಡೆಯಾ- ಸಿದ್ಧರಾಮಯ್ಯಾ ಅಂಗನೆಯ ಮೊಲೆ ಲಿಂಗವೆ ? ಬಳ್ಳ ಲಿಂಗವೆ ? ಕಿತ್ತು ಬಹ ಸಾಣೆ ಲಿಂಗವೆ ? ಆಡಿನ ಹಿಕ್ಕಿ ಲಿಂಗವೆ ? ಮೆಚ್ಚುವರೆ ಪ್ರಮಥರು ? ಮೆಚ್ಚುವರೆ ಪುರಾತನರು, ನಿಮ್ಮ ಭಕ್ತರು ? ಭಾವಭ್ರಮೆಯಳಿದು, ಗುಹೇಶ್ವರಾ ನಿಮ್ಮಲ್ಲಿ ಅನಾದಿಸಂಸಿದ್ಧವಾದ ಜಂಗಮವನರಿದಾತ ಬಸವಣ್ಣನೊಬ್ಬನೆ. ಅಂಗವಿಡಿದಂಗಿಯನೇನೆಂಬೆ ? ಆರನೊಳಕೊಂಡ ಅನುಪಮನು ನೋಡಾ ! ಮೂರರ ಹೊಲಿಗೆಯ ಬಿಚ್ಚಿ, ಎಂಟಾತ್ಮ ಹರಿಗಳ ತನ್ನಿಚ್ಛೆಯೊಳ್ ನಿಲಿಸಿದ ನಿಜಸುಖಿಯು ನೋಡಾ. ತತ್ತ್ವ ಮೂವತ್ತಾರ ಮೀರಿ, ಅತ್ತತ್ತವೆ ತೋರ್ಪ ಆಗಮ್ಯನು ನೋಡಾ ! ನಮ್ಮ ಗುಹೇಶ್ವರನ ಶರಣ ಅಲ್ಲಯ್ಯನ ಇರವನೊಳಕೊಂಡ ಪರಮಪ್ರಸಾದಿ ಮರುಳಶಂಕರದೇವರ ನಿಲವ ಬಸವಣ್ಣನಿಂದ ಕಂಡೆ ನೋಡಾ ಸಿ...